ಪ್ರಕರಣ – 1
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕಾರ್ಯಗಳು ಮತ್ತು ಜವಬ್ದಾರಿಗಳು

 
ಕ್ರ.ಸಂ ಸಂಸ್ಥೆಯ ಹೆಸರು ವಿಳಾಸ PÁAiÀÄðUÀ¼ÀÄ ಜವಬ್ದಾರಿಗಳು
1 ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ
ಕೇಂದ್ರ ಕಚೇರಿ :
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ
ಸ್ಕೌಟ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ – 571 201
ದೂರವಾಣಿ : 08272-229074
1. ಅಕಾಡೆಮಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದು. ಈ ಉದ್ದೇಶಕ್ಕಾಗಿ ಸಂಶೋಧನಾಲಯ, ಗ್ರಂಥಾಲಯ ಮುಂತಾದುವನ್ನು ಸ್ಥಾಪಿಸುವುದು.
2. ಅಕಾಡೆಮಿಯು ತನ್ನ ಉದ್ದೇಶಗಳ ಅಭಿವೃದ್ಧಿಗಾಗಿ ಮತ್ತು ಬೆಳವಣಿಗೆಗಾಗಿ ಬೇರೆ ಕಡೆಗಳಲ್ಲಿರುವ ಅದೇ ರೀತಿಯ ಅಕಾಡೆಮಿಗಳೊಂದಿಗೆ ಮತ್ತು ಕರ್ನಾಟಕದಲ್ಲಿರುವ ಇತರ ಸಂಸ್ಥೆಗಳೊಡನೆ ಸಹಕರಿಸುವುದು; ಉತ್ತೇಜನ ನೀಡುವುದು.
3. ಅಕಾಡೆಮಿಯ ಕಾರ್ಯಚಟುವಟಿಕೆಗಳ ಉದ್ದೇಶಕ್ಕಾಗಿ ಸರ್ಕಾರದಿಂದ ಪಡೆದ ಅನುದಾನ ಹಾಗೂ ವಿವಿಧ ಮೂಲಗಳಿಂದ ವಂತಿಕೆಗಳು ಮತ್ತು ದಾನಗಳ ಮೂಲಕ ನಿಧಿ ಸಂಗ್ರಹಣೆ ಮಾಡಬಹುದು. ಹೀಗೆ ಸಂಗ್ರಹಿಸಿದ ನಿಧಿಯನ್ನು ಅಕಾಡೆಮಿಯ ಕಾರ್ಯೋದ್ದೇಶಗಳಿಗೆ ಬದ್ಧವಾಗಿ ಬಳಸಿದ ಬಗ್ಗೆ ಕರ್ನಾಟಕ ಸಾರ್ವಜನಿಕ ಸಂಗರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, ಕರ್ನಾಟಕ ಆರ್ಥಿಕ ಸಂಹಿತೆ, ಸಾದಿಲ್ವಾರು ಸಂಹಿತೆ ಪ್ರಕಾರ ಖರ್ಚಿನ ವಿವರಗಳನ್ನು ಇಡುವುದು. ವಂತಿಕೆ ಹಾಗೂ ದಾನ ಕೊಟ್ಟವರು ಆಪೇಕ್ಷಿಸಿದ್ದಲ್ಲಿ ಅವರ ವಂತಿಕೆ ಹಾಗೂ ದಾನದ ಮೊತ್ತದ ಖರ್ಚಿನ ವಿವರಗಳನ್ನು ಲಿಖಿತವಾಗಿ ಅವರಿಗೆ ಒದಗಿಸುವುದು.
4. ಸಾಹಿತ್ಯ-ಸಂಸ್ಕøತಿಯನ್ನು ಬೆಳೆಸುವ ನಿಟ್ಟಿನಲ್ಲಿ ಅಕಾಡೆಮಿಯು ವಿವಿಧ ಜಿಲ್ಲೆ ಮತ್ತು ರಾಜ್ಯ/ಹೊರರಾಜ್ಯಗಳಲ್ಲಿ ಕಾರ್ಯಕ್ರಮ ಆಯೋಜನೆ
5. ಅಕಾಡೆಮಿಯ ಸಾಹಿತ್ಯ, ಕಲೆ, ಸಂಸ್ಕøತಿಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ, ಕಾರ್ಯಗಾರ, ಸಂವಾದ, ನಾಟಕೋತ್ಸವ, ಉನ್ನತ ಮಟ್ಟದ ಕೊಡವ ಸಾಂಸ್ಕøತಿಕ ಮೇಳ ನಡೆಸುವುದು, ಕೊಡವ ಸಂಸ್ಕøತಿಗೆ ಸಂಬಂಧಿಸಿದಂತೆ ಕೊಡವ ನೃತ್ಯಗಳನ್ನು ಶಾಲಾ ಮಕ್ಕಳಲ್ಲಿ ಕಲಿಸುವ ನಿಟ್ಟಿನಲ್ಲಿ ಆಯಾ ಶಾಲೆಗಳಲ್ಲಿ ಆಟ್-ಪಾಟ್ ತರಬೇತಿ ಶಿಬಿರ 15ದಿನಗಳವರೆಗೆ, ಕೊಡವ ಸಾಂಸ್ಕøತಿಕ ಸ್ಫರ್ಧೆ, ಕೃಷಿ ಹಬ್ಬ ಆಚರಣೆ ಹೀಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸುವುದು. ಈ ಕಾರ್ಯಕ್ರಮಗಳನ್ನು ಎರಡು ವಿಧಾನಗಳಲ್ಲಿ ವ್ಯವಸ್ಥೆಗೊಳಿಸಬಹುದು. 
   1. ಅಕಾಡೆಮಿಗಳೇ ನೇರವಾಗಿ ಈ     ಕಾರ್ಯಕ್ರಮಗಳನ್ನು ರೂಪಿಸಿ ವ್ಯವಸ್ಥೆಗೊಳಿಸುವುದು.
   2. ವಿವಿಧ ಸಂಘ-ಸಂಸ್ಥೆಗಳ ಜೊತೆ  ಸಂಯುಕ್ತವಾಗಿ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸುವುದು.
6. ಕರ್ನಾಟಕದಲ್ಲಿ ಅಕಾಡೆಮಿಯ ಕಾರ್ಯಚಟುವಟಿಕೆಗಳಿಗೆ ಅರ್ಹಸಂಸ್ಥೆಗಳಿಗೆ ಮನ್ನಣೆ ನೀಡುವುದು.
7. ಕರ್ನಾಟಕ ರಾಜ್ಯದ ವಿವಿಧ ಪ್ರದೇಶಗಳಲ್ಲಿರುವ ಸಾಹಿತ್ಯ, ಜಾನಪದ, ಕಲೆ ಮತ್ತು ಸಂಸ್ಕøತಿಯ ವಿವಿಧ ಪ್ರಕಾರಗಳನ್ನು ಪುನರವಲೋಕಿಸುವುದು ಮತ್ತು ಅವುಗಳನ್ನು ಉಳಿಸಿಕೊಂಡು ಬರುವುದು ಮತ್ತು ಅಭಿವೃದ್ಧಿಗೊಳಿಸುವುದು ಹಾಗೂ ಹೆಚ್ಚಿನ ಉತ್ತೇಜನ ಕೊಡುವುದು.
8. ಕರ್ನಾಟಕ ರಾಜ್ಯದಲ್ಲಿ ಸಾಹಿತ್ಯ ಮತ್ತು ಸಂಸ್ಕøತಿಗೆ ಪೂರಕವಾದ ಉತ್ಸವಗಳನ್ನು ಏರ್ಪಡಿಸುವುದು.
9. ಕೊಡವ ಸಾಹಿತ್ಯ ಸಂಸ್ಕøತಿಯಲ್ಲಿ ಸಾಧನೆ ಮಾಡಿದವರಿಗೆ ಗೌರವ ಪ್ರಶಸ್ತಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ ಸಾಧನೆಗಳನ್ನು ಸಾಧಿಸಿದ ಲೇಖಕರಿಗೆ ಪುಸ್ತಕ ಬಹುಮಾನಗಳನ್ನು ನೀಡುವುದು. ತಂತಮ್ಮ ಕ್ಷೇತ್ರದ ಪ್ರತಿಭಾನ್ವಿತರಿಗೆ ಪ್ರಶಸ್ತಿ-ಪುರಸ್ಕಾರ ಹಾಗೂ ಬಹುಮಾನಗಳನ್ನು ಪ್ರತಿವರ್ಷವೂ ಕೊಡಬೇಕಾಗಿರುತ್ತದೆ.
10. ಕರ್ನಾಟಕ ಸರ್ಕಾರ, ಕೇಂದ್ರಸರ್ಕಾರ ಮತ್ತು ಕೇಂದ್ರ ಅಕಾಡೆಮಿಗಳು ಆಪೇಕ್ಷಿಸಿದಾಗ ಸೂಕ್ತ ಸಲಹೆಗಳನ್ನು ನೀಡುವುದು.
11. ಕೊಡವ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಪುಸ್ತಕ ಪ್ರಕಟಣೆಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದ ರೀತಿ ಮಾಡಬಹುದು. ಈ ಪ್ರಕಟಣೆಗಳಿಗೆ ವಾರ್ಷಿಕ ಅನುದಾನದಲ್ಲಿ ವಾರ್ಷಿಕ ಕಾರ್ಯಕ್ರಮಗಳಿಗೆ ಗೊತ್ತುಪಡಿಸಿದ ಮೊತ್ತದಲ್ಲಿ ಶೇ.15ರಷ್ಟನ್ನು ಮಾತ್ರ ಹಂಚಿಕೆ ಮಾಡಿ ಬಳಸಿಕೊಳ್ಳಬೇಕು.
12. ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ –ಕೊಡವ ಭಾಷಿಕರ ಸಾಹಿತ್ಯ, ಕಲೆ, ಜಾನಪದ, ಸಂಸ್ಕøತಿಗೆ ಕ್ಷೇತ್ರಕ್ಕೆ ಹಾಗು ವ್ಯಾಪ್ತಿಗೆ ಸೇರಿದ ಮಾಹಿತಿ ಸಂಗ್ರಹ ಕಾರ್ಯವನ್ನು ಮಾಡುವುದು.
13. ಕರ್ನಾಟಕದ ವಿವಿಧ ಭಾಗಗಗಳಲ್ಲಿ ಸಾಹಿತ್ಯ, ಕಲೆ, ಜಾನಪದ, ಸಂಸ್ಕøತಿಯ ಅಭಿವೃದ್ಧಿಗಾಗಿ ಯೋಜನೆ ತಯಾರಿಸುವುದು ಮತ್ತು ಸಲಹೆ, ಉತ್ತೇಜನ ಮತ್ತು ಬೆಂಬಲ ನೀಡುವುದು.
14. ಕೊಡವ-ಕೊಡವ ಭಾಷಿಕ ಜನಾಂಗದವರ ಸಾಕ್ಷ್ಯಚಿತ್ರ ಸಂಗ್ರಹಿಸುವುದು.
15. ಕೊಡವ-ಕೊಡವ ಭಾಷಿಕರ  ವಿಷಯಗಳನ್ನು ಒಳಗೊಂಡ ಸಮಗ್ರ ದಾಖಲೀಕರಣ ನಿರ್ವಹಿಸುವುದು.
16. ಅಕಾಡೆಮಿಯ ಕಾರ್ಯಕ್ರಮ ಮತ್ತು ಯುವ ಸಾಹಿತಿ ಕಲಾವಿದರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಥೆ, ಕವನ, ಚುಟುಕು, ಕಾದಂಬರಿ ಮುಂತಾದವುಗಳ ವಿಷಯಗಳನ್ನು ಒಳಗೊಂಡ “ತ್ರೈಮಾಸಿಕ ಪೊಂಗುರಿ”ಯನ್ನು ಪ್ರಕಟಪಡಿಸುತ್ತಿದೆ.
17. ಆಯಾ ವರ್ಷದ ಆಯಾವ್ಯಯದ ಪರಿಮಿತಿಯಲ್ಲಿ ಆರ್ಥಿಕ ವರ್ಷದ ಪ್ರಾರಂಭದಲ್ಲಿಯೇ ಕ್ರಿಯಾಯೋಜನೆ ಮತ್ತು ಬಜೆಟನ್ನು ಸಿದ್ಧಪಡಿಸಿ ಸರ್ಕಾರದಿಂದ ಅನುಮೋದನೆ ಪಡೆಯಬೇಕು ಮತ್ತು ಆ ಪ್ರಕಾರ ಅನುಷ್ಠಾನಗೊಳಿಸಬೇಕು.
1. ಈ ನಿಯಮಗಳಡಿ ಉಪಬಂಧಿಸಿದಂತೆ ಸರ್ವಸದಸ್ಯರ ಮೊದಲ ಸಭೆಯಲ್ಲಿ ಸ್ಥಾಯಿಸಮಿತಿಯ ಸದಸ್ಯರಯನ್ನು ಆಯ್ಕೆ ಮಾಡುವುದು. ಸರ್ವಸದಸ್ಯರ ಸಭೆಯ ಕೋರಂ 1/3 ಇರಬೇಕು.
2. ಯಾವುದೇ ಸದಸ್ಯರು ಅನುಕ್ರಮವಾಗಿ ನಿರಂತರ ಮೂರು ಸಭೆಗಳೊಗೆ ಅಧ್ಯಕ್ಷರ ಅನುಮತಿ ಪಡೆಯದೆ ಗೈರುಹಾಜರಾದರೆ ಆ ಸದಸ್ಯನ ಸದಸ್ಯತ್ವವು ರದ್ದಾಗುವುದು.
3. ನಿರ್ದಿಷ್ಟ ಉದ್ದೇಶಗಳಿಗಾಗಿ ಮತ್ತು ನಿರ್ದಿಷ್ಟ ಅವಧಿಗಾಗಿ ತನ್ನ ಸದಸ್ಯರ ಪೈಕಿಯಿಂದ ಆಯ್ಕೆ ಮಾಡಿದ ಪ್ರತಿಯೊಂದು ಉಪಸಮಿತಿಯಲ್ಲಿ 3ಕ್ಕಿಂತ ಹೆಚ್ಚು ಸದಸ್ಯರಿರದಂತೆ ಉಪಸಮಿತಿಗಳನ್ನು ರಚಿಸುವುದು. ಈಉಪಸಮಿತಿಗೆ ನಿರ್ದಿಷ್ಟ ಕೆಲಸ ಮತ್ತು ಅವಧಿಗಾಗಿ ಹೊರಗಿನಿಂದ ಪರಿಣತರನ್ನು/ಸದಸ್ಯರನ್ನಾಗಿ ತೆಗೆದುಕೊಳ್ಳಬಹುದು. ಈ ಸಮಿತಿಗಳು ತಮ್ಮ ವರದಿಗಳನ್ನು/ಶಿಫಾರಸ್ಸುಗಳನ್ನು ಅಕಾಡೆಮಿಗೆ ಒಪ್ಪಿಸತಕ್ಕದ್ದು. ಆದಾದ ಮೇಲೆ ಆ ಉಪಸಮಿತಿಗಳು ತಂತಾನೆ ವಿಸರ್ಜನೆಗೊಳ್ಳುತ್ತವೆ.
4. ಸ್ಥಾಯಿ ಸಮಿತಿಯು ಸಿದ್ಧಪಡಿಸಿದ ವಾರ್ಷಿಕ ಕ್ರಿಯಾಯೋಜನೆಗಳನ್ನು ಮತ್ತು ವಾರ್ಷಿಕ ಬಜೆಟ್ಟನ್ನು ಪರಿಶೀಲಿಸುವುದು ಮತ್ತು ಅನುಮೋದಿಸುವುದು ಹಾಗೂ ಅನುಷ್ಟಾನಕ್ಕೆ ಪೂರ್ವದಲ್ಲಿ ಈ ಕ್ರಿಯಾ ಯೋಜನೆಗೆ ಸರ್ಕಾರದಿಂದ ಅನುಮೋದನೆ ಪಡೆಯುವುದು. ಬಜೆಟ್‍ನಲ್ಲಿ ಹಂಚಿಕೆ ಮಾಡಿದ ಆಯವ್ಯಯದ ಪರಿಮಿತಿಯ ಹಣದಲ್ಲಿ ನಿಯಮಗಳಂತೆ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು.
5. ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾರ್ಗದರ್ಶನ ಸೂತ್ರಗಳನ್ನು ರಚಿಸುವುದು.
6. ಅಕಾಡೆಮಿಯು ಆರ್ಥಿಕ ವರ್ಷದಲ್ಲಿ ತನ್ನ ಸರ್ವಸದಸ್ಯರ ಸಭೆಯನ್ನು ಸ್ಥಾಯಿಸಮಿತಿಯು ನಿಗಧಿಪಡಿಸಿದ ದಿನಾಂಕದಂದು ಕೇಂದ್ರಸ್ಥಳದಲ್ಲಿ ನಾಲ್ಕು ತಿಂಗಳಿಗೊಂದು ಸಲ ಸಭೆಗೆ ಸೇರತಕ್ಕದ್ದು, ಅಧ್ಯಕ್ಷರು ಅಥವಾ ಸ್ಥಾಯಿ ಸಮಿತಿಯು ತಾವಾಗಿಯೇ ಅಥವಾ ಅಕಾಡೆಮಿಯು 1/3ರಷ್ಟು ಸದಸ್ಯರಿಗಿಂತ ಕಡಿಮೆಯಿಲ್ಲದಷ್ಟು ಸದಸ್ಯರ ಕೋರಿಕೆಯ ಮೇರೆಗೆ ಯಾವುದೇ ಇತರ ಸಮಯದಲ್ಲಿ ಒಂದು ವಿಶೇಷ ಸಭೆಯನ್ನು ಕರೆಯಬಹುದು.
7. ಅಕಾಡೆಮಿಯು ನಿಯಮ 7ರಲ್ಲಿ ವಿವರಿಸಿರುವಂತೆ, ವಿವಿಧ ಮೂಲಗಳ ಮೂಲಕ ಸರ್ಕಾರದಿಂದ ಮಂಜೂರಾದ ಅನುದಾನಗಳೂ ಸೇರಿದಂತೆ ತನ್ನ ನಿಧಿಗಳ ಪರಿಮಿತಿಗಳೊಡನೆ ಅಕಾಡೆಮಿಯ ಉದ್ದೇಶ, ಗುರಿ ಮತ್ತು ಧ್ಯೇಯಗಳ ಜಾರಿಗಾಗಿ ಎಲ್ಲ ಆಡಳಿತಾತ್ಮಕ ಮತ್ತು ಆರ್ಥಿಕ ಅಧಿಕಾರವನ್ನು ಕಾರ್ಯವಿಧಾನ ನಿಯಮಗಳನ್ನು ರಚಿಸಿ ಅವುಗಳಿಗೆ ಸರ್ಕಾರದ ಅನುಮೋದನೆ ಪಡೆದು ಅನುಷ್ಠಾನಗೊಳಿಸುವುದು.